ರಾಜ್ಯ

ಮುಡಾ ಪ್ರಕರಣ ಮುಚ್ಚಿಡಲು ಜಾತಿಗಣತಿ ನಾಟಕ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗೆಲ್ಲಾ ಸಾರ್ವಜನಿಕರ ಗಮನವನ್ನು ಬೇರೆ ಕಡೆಗೆ ಹರಿಸಲು, ಈ ಸರ್ಕಾರ ಯಾವಾಗಲೂ ತಂತ್ರಗಾರಿಕೆ ಹೂಡುತ್ತದೆ. ಹೀಗಾಗಿ ಮುಡಾ ಪ್ರಕರಣದಿಂದ ದಾರಿ ತಪ್ಪಿಸುವ ಕೆಲಸ ಮಾಡಿ ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕವಾಡುತ್ತಿದೆ ಎಂದು ಆರೋಪಿಸಿದರು.

ಜಾತಿಗಣತಿ ಪ್ರಾರಂಭಿಸಲು 10 ವರ್ಷಗಳ ಹಿಂದೆ ಕಾಂತರಾಜು ಆಯೋಗ ರಚನೆ ಮಾಡಿತ್ತು. ಈ ಹತ್ತು ವರ್ಷಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿವೆ. ಆ ಹತ್ತು ವರ್ಷಗಳ ಜಾತಿಗಣತಿಯನ್ನು ಆಯೋಗವು ಸಿಎಂ ಸಿದ್ದರಾಮಯ್ಯರಿಗೆ ಲೋಕಸಭೆ ಚುನಾವಣೆಗೂ ಮೊದಲೇ ವರದಿ ನೀಡಿತ್ತು. ಹೀಗಿದ್ದರೂ ಹಳೆಯ ಜಾತಿಗಣತಿಯನ್ನು ವರದಿ ಕೊಟ್ಟ ಕೂಡಲೇ ಬಿಡುಗಡೆ ಮಾಡದೇ ಸುಮ್ಮನಿದ್ದು, ಈಗ ಮಾತ್ರ ಯಾಕೆ ಬಿಡುಗಡೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಮುಡಾ ವಿಚಾರವನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಜಾತಿಗಣತಿ ನಾಟಕವಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 

 

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago