ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ ಈಗಲೇ ಜಾರಿ ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ. ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ. ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ ಜಾತಿಗಣತಿ ಮಾಡಿ ಎಂದು ಕುಮಾರಸ್ವಾಮಿ ಸಿಎಂಗೆ ಟಾಂಗ್ ಕೊಟ್ಟರು
ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:
ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…