ರಾಜ್ಯ

ಜಾತಿಗಣತಿ; ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ಹೀಗಾಗಿ ರಾಜ್ಯ ಜಾತಿಗಣತಿ ಈಗಲೇ ಜಾರಿ ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ.  ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ. ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ ಜಾತಿಗಣತಿ ಮಾಡಿ ಎಂದು ಕುಮಾರಸ್ವಾಮಿ  ಸಿಎಂಗೆ ಟಾಂಗ್ ಕೊಟ್ಟರು

ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:
ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಂಬೂಸವಾರಿಯಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago