ಹೊಸದಿಲ್ಲಿ: ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಜಾತಿ ಜನಗಣತಿ ಹಾಗೂ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.
10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಜೂನ್ 12 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇನ್ನು ನಿರ್ಧಿಷ್ಟ ಕಾಲಮಿತಿ 90 ದಿನಗಳ ಅವಧಿಯಲ್ಲಿ ವರದಿ ತರಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.