caste census in india (1)
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟು ಮಾಡಿದ್ದ ಹಿಂದುಳಿದ ವರ್ಗಗಳ ಆಯೋಗದ ವರದಿ ಕೈಬಿಟ್ಟ ಬೆನ್ನಲ್ಲೇ ಇದೀಗ ಸೆ.22ರಿಂದ ಅ.7ರವರೆಗೆ ಜಾತಿಗಣತಿ ಮರುಸಮೀಕ್ಷೆ ನಡೆಯಲಿದೆ.
ರಾಜ್ಯ ಶಾಶ್ವತ ಹಿಂದುಳಿದ ವರ್ಗ ಯೋಗದಿಂದ ಜಾತಿಗಣತಿ ಸಮೀಕ್ಷೆ ನಡೆಯಲಿದ್ದು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನೆಪದಲ್ಲಿ ಮತ್ತೆ ಜಾತಿಗಣತಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಆಯೋಗದಿಂದ ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಒಳ ಮೀಸಲಾತಿ ಸಮೀಕ್ಷೆ ಮಾದರಿಯಲ್ಲಿಯೇ ಜಾತಿಗಣತಿ ಸಮೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರ ಶಿಕ್ಷಕರ ಮೂಲಕ ಮನೆ ಮನೆ ಸರ್ವೆ ನಡೆಸಲು ಸರ್ಕಾರದ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಸಮೀಕ್ಷೆಯಲ್ಲಿ ಒಟ್ಟು 1.65 ಲಕ್ಷ ಗಣತಿದಾರರನ್ನು ಬಳಸಿಕೊಳ್ಳಲಾಗುತ್ತದೆ. ಶಿಕ್ಷಕರ ಜೊತೆಗೆ ವಿವಿಧ ಇಲಾಖೆಗಳ ಸಿಬ್ಬಂದಿಗಳ ಜೊತೆಗೆ ಗ್ರಾಮ ಒನ್, ಬೆಂಗಳೂರು ಒನ್, ಸಕಾಲ ಸೇವಾಕೇಂದ್ರದ ಮೂಲಕ ಸಮೀಕ್ಷೆ ನಡೆಸಲಾಗುತ್ತದೆ.ಇದರ ಜೊತೆಗೆ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸಮೀಕ್ಷೆ ನಡೆಯಲಿದ್ದು, ರಾಜ್ಯದ ಏಳು ಕೋಟಿ ಜನರನ್ನು ಸಮೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ.
ಹೀಗಾಗಿ ಸಮೀಕ್ಷೆ ಆರಂಭಕ್ಕೂ ಮುನ್ನವೇ ಎಚ್ಚೆತ್ತುಕೊಂಡಿರುವ ಸಮುದಾಯಗಳು, ಆಯಾಯ ಜಾತಿ, ಸಮುದಾಯದ ನಾಯಕರಿಂದ ಜಾಗೃತಿ ಸಭೆ, ವೀರಶೈವ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಸಮಾಜದ ನಾಯಕರಿಂದ ಸಭೆಗಳ ಮೇಲೆ ಸಭೆ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲಾವಾರು ಸಭೆ ನಡೆಸಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಚಿವರು, ಸಮುದಾಯದ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸುವಂತೆ ಸೂಚಿಸಿದ್ದಾರೆ. ಕಳೆದ ಬಾರಿಯಂತೆ ಗೊಂದಲ ಆಗದಂತೆ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದ್ದು, ಸಮುದಾಯಗಳಿಗೆ ಅನ್ಯಾಯವಾಗದಂತೆ ಪಕ್ಷಾತೀತವಾಗಿ ಎಲ್ಲಾ ಪಕ್ಷದ ಮುಖಂಡರು ಎಚ್ಚರಿಕೆ ವಹಿಸಿದ್ದಾರೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…