ರಾಜ್ಯ

ಜಾತಿಗಣತಿ ಮರುಸಮೀಕ್ಷೆ : ಸೆ.22ರಿಂದ ಸರ್ವೇ ಆರಂಭ : ಸಿಎಂ ಮಾಹಿತಿ

ಬೆಂಗಳೂರು : ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲಾಗುತ್ತಿದ್ದು, ಅ.7ರವರೆಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.

2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ. ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ.

ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದರು.

ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ. ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ.

ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ. ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ. ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.

ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು.

ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.

ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್‌ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಎಲ್ಲರೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago