ರಾಜ್ಯ

ಜಾತಿಗಣತಿ ವರದಿ : ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ: ಸಿಎಂ

ರಾಯಚೂರು: ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ

ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ
ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago