ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸಿಎಂ ಹುದ್ದೆ ಮತ್ತು ಅಧಿಕಾರವನ್ನು ಕಳೆದುಕೊಳ್ಳುತ್ತೇನೆ ಎಂಬ ಭಯ ಕಾಡುತ್ತಿದೆ. ಹೀಗಾಗಿ ಸಿದ್ದರಾಮಯ್ಯ ರಾಜ್ಯದಲ್ಲಿ ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಮೊದಲು ಜಾತಿಗಣತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ, ಆ ನಂತರ ಅದರ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.