ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಕಾಂತರಾಜ್ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 29ರಂದು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಇದೀಗ ವರದಿಯ ಲಕೋಟೆಯನ್ನು ತೆರೆದು ಪರಿಶೀಲಿಸಲು ಅನುಮೋದನೆ ಕೋರಿ ಪ್ರಸ್ತಾಪಿಸಲಾಗಿದೆ.
ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳನ್ನಿಟ್ಟುಕೊಂಡು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…