Mysore
30
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವೈಜ್ಞಾನಿಕವಾಗಿದೆ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲಾ ಸಮುದಾಯಗಳ ಜನಸಂಖ್ಯೆಯ ಮಾಹಿತಿಯಿದೆ. ಈ ಸಮೀಕ್ಷೆ ವೈಜ್ಞಾನಿಕವಾಗಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿ ಕುರಿತ ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ಮುಂದುವರಿಯಲಿದೆ. ಆದರೆ, ಏಪ್ರಿಲ್.‌24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದರು.

Tags:
error: Content is protected !!