ಬೆಳಗಾವಿ: ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿಯನ್ನು ತಮ್ಮ ಸಂಪುಟ ಸಹೋದ್ಯೀಗಿಗಳ ಮುಂದೆ ಮಂಡಿಸಿದ್ದಾರೆ. ಆದರೆ, ಈ ವರದಿ ಬಗ್ಗೆ ತಮ್ಮ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸದ್ಯ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಯಾವ ಜಾತಿಗೂ ಅನ್ಯಾಯವಾಗಬಾರದು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.





