ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್‌ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.
ಇನ್ನು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಶೇ.95ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…