ರಾಜ್ಯ

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ‌ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್‌ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

ಇನ್ನು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಶೇ.95ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

16 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

21 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

28 mins ago