ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬದ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರ ನೀಡಿ ಕಳುಹಿಸಿದರು.
ಧರ್ಮ, ಜಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಡಿಸಿಎಂ ಡಿಕೆಶಿ ವಿವರಣೆ ನೀಡಿದ್ದು, ಕುಟುಂಬದ ಮಾಹಿತಿ, ಶಿಕ್ಷಣ, ಆದಾಯ, ಕೆಲಸ ಕಾರ್ಯ ಸೇರಿದಂತೆ ಸಮೀಕ್ಷೆಯಲ್ಲಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ.





