Mysore
18
scattered clouds

Social Media

ಭಾನುವಾರ, 25 ಜನವರಿ 2026
Light
Dark

ನಾಳೆಯಿಂದ ಜಾತಿ ಜನಗಣತಿ ಸಮೀಕ್ಷೆ: ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ

caste census and census sivaji ganesan article

ಬೆಂಗಳೂರು: ಹಲವು ಗೊಂದಲ, ವಿರೋಧಗಳ ನಡುವೆ ದಸರಾ ಹಬ್ಬದ ನಡುವೆ ನಾಳೆಯಿಂದ ಅಕ್ಟೋಬರ್.7ರವರೆಗೆ ರಾಜ್ಯದದ್ಯಾಂತ ಶೈಕ್ಷಣಿಕ ಹಾಗೂ ಸಾಮಾಜಿಕ (ಜಾತಿ ಜನಗಣತಿ) ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ರಾಜ್ಯಾದ್ಯಂತ 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರವನ್ನು ಕೋರಿದೆ. ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವುದು ಈ ಸಮೀಕ್ಷೆಯ ಮುಖ್ಯ ಗುರಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಸರಕಾರವು ದಿನಾಂಕವನ್ನು ನಿಗದಿಪಡಿಸಿದೆ. ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮೀಕ್ಷೆಯ ಕುರಿತು ಮಾಹಿತಿ ನೀಡಲಾಗಿದೆ. ಸಮೀಕ್ಷಾ ಕಾರ್ಯದಲ್ಲಿ ತೊಡಗುವ ಗಣತಿದಾರರಿಗೆ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಸಮೀಕ್ಷೆಯಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಮಾಡಲು ಮತ್ತು ಇದರ ಮಹತ್ವದ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ.ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆ ಮತ್ತು ಇತರೆ ಸಾಮಾಜಿಕ ಅಂಶ ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಒದಗಿಸುವ ಉದ್ದೇಶದಿಂದ ದತ್ತಾಂಶ ಸಂಗ್ರಹ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆಯು ಸುಮಾರು 60 ಪ್ರಶ್ನೆ ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆ?ಯಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಕಾಲಕಾಲಕ್ಕೆ ಸಭೆ ನಡೆಸಿ ಸಮೀಕ್ಷೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿದೆ..

7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.
ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು.ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು.

ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.

ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಎಲ್ಲರೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು.

Tags:
error: Content is protected !!