ಬೆಂಗಳೂರು : ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು(ಏ.17)ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಯಾವುದೇ ತೀರ್ಮನ ತೆಗೆದುಕೊಳ್ಳಲು ಸಚಿವ ಸಂಪುಟ ವಿಫಲವಾಗಿದೆ.
ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ವರದಿ ಅನುಷ್ಠಾನಕ್ಕೆ ಸಂಪುಟದ ಕೆಲವು ಸಚಿವರಿಂದ ಪರ-ವಿರೋಧ ವ್ಯಕ್ತವಾಯಿತು.
ಸಿಎಂ ಹೇಳಿದ್ದೇನು?
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತಷ್ಟು ಚರ್ಚಿಸೋಣ ಎಂದು ಸಿಎಂ ಹೇಳಿದ್ದಾರೆ. ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಮತ್ತೆ ಚರ್ಚಿಸೋಣ ಅಂತ ಸಿಎಂ ಹೇಳಿದ್ದಾರೆ. ನಿಮ್ಮ ಆತಂಕ, ಗೊಂದಲಗಳು ಏನೇ ಇದ್ರೂ ಲಿಖಿತ ರೂಪದಲ್ಲಿ ಕೊಡಿ, ಅದರ ಬಗ್ಗೆ ಅಲ್ಲಿ ಚರ್ಚೆ ಮಾಡೋಣ. ಪರವೋ ವಿರೋಧವೋ ನಿಮ್ಮ ಆಕ್ಷೇಪಣೆಗಳನ್ನು ತಿಳಿಸಿ, ಸಂಕ್ಷಿಪ್ತವಾಗಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ ಅಂತ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸೂಚಿಸಿದ್ದಾರೆ.
ಸಹೋದ್ಯೋಗಿಗಳಿಂದ ವರದಿ ಪಡೆದ ನಂತರ ಅಂತಿಮ ತೀರ್ಮಾನ ಮಾಡುವ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…
ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ…
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…