ರಾಜ್ಯ

ಸೆ.22ರಿಂದ ಜಾತಿ ಸಮೀಕ್ಷೆ

  • ಜಾತಿ ತಾರತಮ್ಯ ನಿವಾರಣೆ ಗಣತಿಯ ಮುಖ್ಯ ಉದ್ದೇಶ: ಸಿಎಂ
  • ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆ ವರದಿ ಸಲ್ಲಿಸಲು ಆದೇ
  • ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ

ಬೆಂಗಳೂರು : ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್ 22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದರು.

ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನಿನ ಒಡೆತನ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಸಲಾಗುವುದು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸಲು ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ತಿಳಿಸಿದರು.

ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕಿದೆ. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿರುವ ಅವರು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.

ಎಚ್.ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ಧಪಡಿಸಿ ಆಗ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಜೊತೆಗೆ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದರು.

ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚಿಸಿರುವ ಮುಖ್ಯಮಂತ್ರಿಯವರು, ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದ್ದು, ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನೂ ಬಳಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್.ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

3 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

3 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

3 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

3 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

3 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

3 hours ago