ರಾಜ್ಯ

ಜಾತಿ ಸಮೀಕ್ಷೆ | ಒಕ್ಕಲಿಗ ಸಮುದಾಯದ ಸಭೆ ಬಳಿಕ ಎಚ್‌ಡಿಕೆ ಹೇಳಿದ್ದೇನು?

ಬೆಂಗಳೂರು : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಹೇಳಿದರು.

ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಫಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು ಎಂದು ಅವರು ಕಿಡಿಕಾರಿದರು.

ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದು ಒಕ್ಕಲಿಗರ ಸಮಾಜ. ಡಿ.ಕೆ ಶಿವಕುಮಾರ್ ಎಲ್ಲಾ ಸಮಸ್ಯೆ ಬಗೆಹರಿಸಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೆ ನೋಡೋಣ, ಏನಾಗುತ್ತದೆ ಅಂತ. ಇದು ಇನ್ನೊಂದು ಕಾಂತರಾಜ್ ವರದಿ ಅಲ್ಲ, ಅದಕ್ಕಿಂತಲೂ ಕೆಟ್ಟದಾಗಿ ಇರುತ್ತದೆ ಎಂದು ದೂರಿದರು ಕೇಂದ್ರ ಸಚಿವರು.

ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ವರದಿ ಕೊಡಬೇಕು ಅಂತ ಮೂರನೇ ಆಯೋಗ ರಚನೆ ಮಾಡಿದೆ. ಮಧುಸೂದನ್ ನಾಯ್ಕ್ ಆಯೋಗ ರಚನೆ ಆಗಿದೆ. ಕೇವಲ ಹದಿನೈದು ದಿನಗಳಲ್ಲಿ ವರದಿ ಕೊಡಬೇಕು ಅಂತೆ. ಆಯೋಗ ಸ್ಟ್ಯಾಚುಟರಿ ಬಾಡಿ, ಹೀಗಾಗಿ ನಾನು ಏನು ಡೈರೆಕ್ಷನ್ ಕೊಡಲು ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಏನಾದರೂ ಬದಲಾವಣೆ ತರಲು ಪವರ್ ಇಲ್ಲ ಅಂತಾರೆ ಎಂದ ಕುಮಾರಸ್ವಾಮಿ ಅವರು; ನಮ್ಮ ಸಮಾಜದ ಭವಿಷ್ಯಕ್ಕಾಗಿ ಹಾಗೂ ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಸಭೆ ಮಾಡಿದ್ದೇವೆ. ಸ್ವಾಮೀಜಿಗಳ ಸೂಚನೆ ಮೇರೆಗೆ ಇಲ್ಲಿ ಸೇರಿದ್ದೇವೆ ಎಂದರು.

ಕ್ರಿಶ್ಚಿಯನ್ ಒಕ್ಕಲಿಗ ಜಾತಿಯನ್ನು ಹೇಗೆ ತೆಗೆಯುತ್ತಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಸಮಯದ ಅಭಾವ ಇದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು,ಈಗ ಏನಿದೆ ಅದನ್ನೇ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬ ಮಂತ್ರಿ ಹೇಳಿದ್ದಾರೆ, ಈಗಿನ ಆಯೋಗ ಉತ್ತಮವಾದ ಆಯೋಗವಂತೆ. ಒಳ್ಳೆಯ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ನಾನು ಆ ಮಂತ್ರಿಯನ್ನು ಕೇಳಲು ಬಯಸುತ್ತೇನೆ, ಇದು ಸತ್ಯದ ಆಯೋಗವೇ? ರಾಜ್ಯ ನೆಮ್ಮದಿಯಾಗಿ ಇದೆ. ಈ ಆಯೋಗ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ಮುಂಜಾಗ್ರತೆ ಕ್ರಮವಾಗಿ ಯಾವುದೇ ಆಲೋಚನೆ ಮಾಡಿಲ್ಲ ಎಂದು ಕೇಂದ್ರ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಮಯ ಮುಂದೂಡುವುದು ಮುಖ್ಯವಲ್ಲ. ವಾಸ್ತವಾಂಶದ ಪರಿಹಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪದೇ ಪದೇ ಚರ್ಚೆ ಮಾಡುತ್ತೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗಾಗಿ ಎಷ್ಟು ರೈತರ ಭೂಮಿ ಬಳಕೆ ಆಗಿದೆ, ಅದರಲ್ಲಿ ಬಹುಪಾಲು ಭೂಮಿ ಕಳೆದುಕೊಂಡವರು ಒಕ್ಕಲಿಗರು. ಈಗಲೂ ಗ್ರೇಟರ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿದೆ ಭೂಮಿಯನ್ನು ಕಿತ್ತುಕೊಳ್ಳುವುದು ನಡೆಯುತ್ತಿದೆ ಎಂದರು ಅವರು.

ಏರ್ ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು. ಇದಕ್ಕೆ ಯಾವ ಸಮಾಜದ ಜಮೀನು ಜಾಸ್ತಿ ಹೋಗುತ್ತಿದೆ? ಬೇರೆ ಸಮಾಜಗಳ ಜನರ ಭೂಮಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಹೋಗಿರಬಹುದು. ಆದರೆ ಹೆಚ್ಚಿನ ಭೂಮಿ ಕಳೆದುಕೊಂಡಿದ್ದು ಒಕ್ಕಲಿಗರು. ಜಮೀನು ಮಾರಿ ಯಾವುದೋ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಏನ್ ಕೊಟ್ಡಿದ್ದಾರೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ನಡೆ ನೋಡಿದರೆ ಇದು ಕಾಂತರಾಜ್ ವರದಿಗಿಂತಲೂ ಕೆಟ್ಟದಾಗಿ ಇರುತ್ತದೆ. ಈ ಬಗ್ಗೆ ಯಾವ ಸಂಶಯವೂ ಬೇಡ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

9 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

38 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

45 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago