ಚಿಕ್ಕಬಳ್ಳಾಪುರ : ಪಟಾಕಿ ಸಿಡಿಸುವ ವೇಳೆ ಹಾರಿದ ಕಿಡಿಯಿಂದ ಗುಜುರಿ ಅಂಗಡಿ ಬೆಂಕಿಗೆ ಆಹುತಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ವಿಜಯಪುರ ಪಟ್ಟಣದ ಬೈಪಾಸ್ ರೋಡ್ ನಲ್ಲಿರುವ ಮಂಡಿ ಬೆಲೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆ ಗುಜರಿ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಭರತ್ ನಗರದ ಮುಬಾರಕ್ ಎಂಬುವವರಿಗೆ ಸೇರಿದ್ದ ಗುಜರಿ ಅಂಗಡಿಯ ಮೇಲೆ ಪಟಾಕಿ ಕಿಡಿ ಬಿದ್ದು ಈ ಅವಘಡ ಸಂಭವಿಸಿದೆ. ಇದರಿಂದ ಸುಮಾರು ಮೂರರಿಂದ ನಾಲ್ಕು ಲಕ್ಷ ರೂಪಾಯಿ ಹಾಳಾಗಿದೆ ಎಂದು ಅಂಗಡಿಯ ಮಾಲಿಕ ತಿಳಿಸಿದ್ದಾರೆ.
ಇನ್ನು ದೇವನಹಳ್ಳಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…