ಬೀದರ್: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಈಶ್ವರ್ ಖಂಡ್ರೆ ಅವರು, ಬೀದರ್ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳ ಜಾನುವಾರುಗಳಲ್ಲಿ ಚರ್ಮಗಂಟು ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಿಶೇಷ ನಿಗಾವಹಿಸಲು ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಇದನ್ನು ಓದಿ : ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ಗೂ ಇಡಿ ಸಮನ್ಸ್ ಜಾರಿ
ಗಡಿಭಾಗದ ಗ್ರಾಮಗಳಲ್ಲಿ ಪಶುವೈದ್ಯಕೀಯ ಇಲಾಖೆಯ ಮೂಲಕ ತಕ್ಷಣವೇ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಬೇಕು. ರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಬೇಕು. ಸೋಂಕಿತ ಜಾನುವಾರುಗಳನ್ನು ಬೇರ್ಪಡಿಸಿ ಇತರ ಜಾನುವಾರುಗಳಿಗೆ ತಗುಲದಂತೆ ಕಾಳಜಿ ವಹಿಸಬೇಕು. ಗಡಿಭಾಗದ ಗ್ರಾಮಗಳಲ್ಲಿ ನಿರಂತರ ನಿಗಾ ಇಡಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿ ಹಾಗೂ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಬೇಕು. ರೈತರು ಹಾಗೂ ಪಶುಪಾಲಕರು ತಮ್ಮ ಜಾನುವಾರುಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.





