ರಾಜ್ಯ

ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ: ರೈತರಿಗೆ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು.!

ಬೀದರ್: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಈ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಬೀದರ್‌ ಜಿಲ್ಲೆಯ ಮಹಾರಾಷ್ಟ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಕೆಲವು ಗ್ರಾಮಗಳ ಜಾನುವಾರುಗಳಲ್ಲಿ ಚರ್ಮಗಂಟು ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಿಶೇಷ ನಿಗಾವಹಿಸಲು ಹಾಗೂ ತುರ್ತು ಕ್ರಮ ಕೈಗೊಳ್ಳುವಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಇದನ್ನು ಓದಿ : ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ಗೂ ಇಡಿ ಸಮನ್ಸ್‌ ಜಾರಿ

ಗಡಿಭಾಗದ ಗ್ರಾಮಗಳಲ್ಲಿ ಪಶುವೈದ್ಯಕೀಯ ಇಲಾಖೆಯ ಮೂಲಕ ತಕ್ಷಣವೇ ಲಸಿಕೆ ಹಾಕಿಸುವ ಕಾರ್ಯ ಕೈಗೊಳ್ಳಬೇಕು. ರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಬೇಕು. ಸೋಂಕಿತ ಜಾನುವಾರುಗಳನ್ನು ಬೇರ್ಪಡಿಸಿ ಇತರ ಜಾನುವಾರುಗಳಿಗೆ ತಗುಲದಂತೆ ಕಾಳಜಿ ವಹಿಸಬೇಕು. ಗಡಿಭಾಗದ ಗ್ರಾಮಗಳಲ್ಲಿ ನಿರಂತರ ನಿಗಾ ಇಡಲು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿ ಹಾಗೂ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಬೇಕು. ರೈತರು ಹಾಗೂ ಪಶುಪಾಲಕರು ತಮ್ಮ ಜಾನುವಾರುಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

12 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

12 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

12 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

12 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

12 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

14 hours ago