Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ.

ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಹೆಮರಾಜಿಕ್‌ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಕಾರಣ ಎಂದು ವರದಿಯಿಂದ ದೃಢಪಟ್ಟಿದೆ.

ಜನವರಿ.16ರಿಂದ 18ರ ನಡುವೆ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿದ್ದವು. ಅರಣ್ಯ ಇಲಾಖೆಯ ವೈದ್ಯರು ಮೃತ ಜಿಂಕೆಗಳ ದೇಹದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಹಾಗೂ ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಪ್ರಯೋಗಾಲಯದ ವರದಿ ಅರಣ್ಯ ಇಲಾಖೆ ಅಧಿಕಾರಿಗಳ ಕೈಸೇರಿದೆ.

ಮೃಗಾಲಯದ ಜಿಂಕೆಗಳು ಸಾಂಕ್ರಾಮಿಕ ಖಾಯಿಲೆಯಿಂದ ಮೃತಪಟ್ಟಿವೆ ಎಂದು ಪ್ರಯೋಗಾಲಯ ವರದಿಯಿಂದ ಖಚಿತವಾಗಿದೆ. ಉಳಿದ ಜಿಂಕೆಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, ಪಶುವೈದ್ಯಕೀಯ ತಂಡ ಮೃಗಾಲಯದಲ್ಲಿ ಬೀಡುಬಿಟ್ಟಿದೆ.

 

Tags:
error: Content is protected !!