N. Chaluvaraya Swamy
ಬೆಂಗಳೂರು: ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಜನರಿಗೆ ತುಂಬಾ ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ್ಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…
ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…
ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…
ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…