ಬೆಂಗಳೂರು : ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ್ಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…