Mysore
22
broken clouds
Light
Dark

ಡಿಕೆಶಿ ವಿರುದ್ಧ ಸಿಬಿಐ ತನಿಖೆ ವಿಚಾರ, ಹೈಕೋರ್ಟ್‌ಗೆ ಯತ್ನಾಳ್‌ ಅರ್ಜಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಯನ್ನು ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದೆ.

ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ, ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಈ ಬಗ್ಗೆ ಸಿಬಿಐ ತನಿಖೆ ನಡೆಸುವುದಾಗಿ ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಯತ್ನಾಳ್‌:
ಕಾಂಗ್ರೆಸ್‌ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಮುಕ್ತಾಯದ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ನಡೆ ಕಾನೂನುಬಾಹಿರವಾಗಿದೆ. ಸರ್ಕಾರ ಮೊಟಕುಗೊಳಿಸುವ ಉದ್ದೇಶವಿದೆ ಅಂತಾ ಹೇಳಿದ್ದಾರೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ.

ಯತ್ನಾಳ್‌ಗೆ ಡಿಕೆಶಿ ತಿರುಗೇಟು:
ಕಾಂಗ್ರೆಸ್‌ ಸಂಪುಟ, ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ, ಇದಕ್ಕೆ ಯಾವಗ ಹೇಗೆ ಉತ್ತರ ಕೊಡಬೇಕು ಕೊಡ್ತೀನಿ ಎಂದಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ:
ಕಾಂಗ್ರೆಸ್‌ ಸಂಪುಟದ ನಡೆಯನ್ನು ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದರೆ. ಈಗಾಗಲೇ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ನಿರ್ಧಾರ ಸಿದ್ದರಾಮಯ್ಯ ಅವರ ಆಡಳಿತಕ್ಕೆ ಕಪ್ಪು ಚುಕ್ಕೆ ಎಂದಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ