ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ.
ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ, ಡಿಸಿಎಂ ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಈ ಬಗ್ಗೆ ಸಿಬಿಐ ತನಿಖೆ ನಡೆಸುವುದಾಗಿ ಅನುಮತಿ ನೀಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಯತ್ನಾಳ್:
ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಮುಕ್ತಾಯದ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ನಡೆ ಕಾನೂನುಬಾಹಿರವಾಗಿದೆ. ಸರ್ಕಾರ ಮೊಟಕುಗೊಳಿಸುವ ಉದ್ದೇಶವಿದೆ ಅಂತಾ ಹೇಳಿದ್ದಾರೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸುವಂತೆ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ.
ಯತ್ನಾಳ್‌ಗೆ ಡಿಕೆಶಿ ತಿರುಗೇಟು:
ಕಾಂಗ್ರೆಸ್ ಸಂಪುಟ, ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ, ಇದಕ್ಕೆ ಯಾವಗ ಹೇಗೆ ಉತ್ತರ ಕೊಡಬೇಕು ಕೊಡ್ತೀನಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ:
ಕಾಂಗ್ರೆಸ್ ಸಂಪುಟದ ನಡೆಯನ್ನು ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದರೆ. ಈಗಾಗಲೇ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ನಿರ್ಧಾರ ಸಿದ್ದರಾಮಯ್ಯ ಅವರ ಆಡಳಿತಕ್ಕೆ ಕಪ್ಪು ಚುಕ್ಕೆ ಎಂದಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…