ರಾಜ್ಯ

ಗೋಧ್ರಾ ರೀತಿ ಅಪಾಯ ಸಂಭವ ಹೇಳಿಕೆ; ಹರಿಪ್ರಸಾದ್‌ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ಮುಂಬರುವ ಸೋಮವಾರ ( ಜನವರಿ 22 ) ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದ ಕುರಿತು ರಾಜ್ಯ ಕಾಂಗ್ರೆಸ್‌ ಮುಖಂಡ ಬಿಕೆ ಹರಿಪ್ರಸಾದ್ ಜನವರಿ 3ರಂದು ಆಘಾತಕಾರಿ ಹೇಳಿಕೆ ನೀಡಿದ್ದರು. ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ ಎಂದು ಹರಿಪ್ರಸಾದ್‌ ತಿಳಿಸಿದ್ದರು.

ಈ ರೀತಿಯ ಹೇಳಿಕೆ ನೀಡಿದ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಬೇಕೆಂದು ಹಲವರು ಕಿಡಿಕಾರಿದ್ದರು ಹಾಗೂ ಇನ್ನೂ ಕೆಲವರು ದೂರನ್ನೂ ಸಹ ನೀಡಿದ್ದರು. ಸದ್ಯ ಸಿಸಿಬಿ ಪೊಲೀಸರು ಈ ರೀತಿಯ ಹೇಳಿಕೆ ನೀಡಿದ ಬಿಕೆ ಹರಿಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದ್ದಾರೆ.

ಕೆಕೆ ಗೆಸ್ಟ್‌ಹೌಸ್‌ನಲ್ಲಿ ಹರಿಪ್ರಸಾದ್‌ ಅವರ ವಿಚಾರಣೆ ನಡೆದಿದ್ದು, ವಿಚಾರಣೆ ಬಳಿಕ ಮಾಧ್ಯಮದವರ ಜತೆ ಮಾತನಾಡಿರುವ ಹರಿಪ್ರಸಾದ್‌ ನನಗೆ ವಿವಿಐಪಿ ಟ್ರೀಟ್‌ಮೆಂಟ್‌ ಬೇಡ, ಬೇಕಿದ್ದರೆ ಅರೆಸ್ಟ್‌ ಮಾಡಿ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ ಸರ್ಕಾರದ ನಡೆ ವಿರುದ್ಧವೂ ಸಹ ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಕಾಂಗ್ರೆಸ್‌ ಸರ್ಕಾರವೇ ಅಥವಾ ಆರ್‌ಎಸ್‌ಎಸ್‌ ಸರ್ಕಾರವೇ, ನಾನು ಯಾವ ಸರ್ಕಾರದಲ್ಲಿದ್ದೇನೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ವಿಜಯೇಂದ್ರ ಅವರನ್ನೂ ಸಹ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಕಥೆಯೇ ಹೀಗಾದರೆ ಕಾಂಗ್ರೆಸ್‌ ಕಾರ್ಯಕರ್ತರ ಕಥೆ ಏನು ಎಂದೂ ಸಹ ಹರಿಪ್ರಸಾದ್‌ ಮಾತನಾಡಿದರು.

andolana

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago