ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪರಪ್ಪನ ಅಗ್ರಹಾರಕ್ಕೆ ಇಂದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ವಿಲ್ಸನ್ ಗಾರ್ಡ್‌ನ್ ನಾಗನ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ವೇಳೆ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಇದರ ಜೊತೆಗೆ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಹಾಗೂ ಜೈಲಿನಲ್ಲಿ ಆರೋಪಿಗಳ ಬಳಿಯಿದ್ದ ಹಣವನ್ನು ಸಹ ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.