ರಾಜ್ಯ

ಗಾಂಧಿ ಅಧಿವೇಶನಕ್ಕೆ 100ರ ಸಂಭ್ರಮ| 10 ಸಾವಿರ ಶ್ರೀಗಂಧ ಸಸಿ ನೆಡುವ ಸಂಕಲ್ಪ

ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ

ಬೆಳಗಾವಿ:  ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ ನೆಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳೊಂದಿಗೆ ಸುವರ್ಣಸೌಧದ 318ನೇ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕೂಡ ಈ ಶತಮಾನೋತ್ಸವವನ್ನು ಸ್ಮರಣೀಯಗೊಳಿಸಲು ಬೆಳಗಾವಿ ಜಿಲ್ಲೆಯ ಆಯ್ದ 100 ಸ್ಥಳಗಳಲ್ಲಿ ತಲಾ 100 ಅಂದರೆ 10 ಸಾವಿರ ಶ್ರೀಗಂಧದ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ನಡೆಯಲಿರುವ ವನಮಹೋತ್ಸವದ ವೇಳೆ ನೆಡಲು ಉದ್ದೇಶಿಸಿರುವ 2 ಕೋಟಿ ಸಸಿಗಳ ಜೊತೆಗೆ ಹೆಚ್ಚುವರಿಯಾಗಿ ಶತಮಾನೋತ್ಸವದ ಸ್ಮರಣಾರ್ಥ 10 ಲಕ್ಷ ಸಸಿಗಳನ್ನು ನಡೆಲಾಗುವುದು ಎಂದರು.

ಶ್ರೀಗಂಧ ನಮ್ಮ ನಾಡಿನ ಅಸ್ಮಿತೆ. ಕನ್ನಡನಾಡಿಗೆ ಗಂಧದಗುಡಿ ಎಂಬ ಖ್ಯಾತಿ ಇದೆ. ಶ್ರೀಗಂಧದ ಮರಕ್ಕೆ ಬಂಗಾರದ ಬೆಲೆ ಇದೆ. ಹೀಗಾಗಿ ಮರಗಳ ಕಳ್ಳತನ ಆಗದಂತೆ ಸುರಕ್ಷಿತವಾದ 100 ಸ್ಥಳಗಳನ್ನು ಆಯ್ಕೆ ಮಾಡಿ, ಪ್ರತಿ ತಾಣದಲ್ಲಿ 100 ಶ್ರೀಗಂಧದ ಸಸಿ ನೆಟ್ಟು ಬೆಳೆಸಿ, ರಕ್ಷಿಸಲಾಗುವುದು ಎಂದು ವಿವರಿಸಿದರು.

ಶ್ರೀಗಂಧದ ಸಸಿಗಳನ್ನು ನೆಡುವ ತಾಣಗಳಲ್ಲಿ ಮಹಾತ್ಮಾಗಾಂಧೀಜಿ ಅವರು 1924ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಛಾಯಾಚಿತ್ರಗಳು ಮತ್ತು ಅಧಿವೇಶನದ ಸಂಕ್ಷಿಪ್ತ ವಿವರವನ್ನು ಪ್ರದರ್ಶಿಸಲಾಗುವುದು.ಇದರಿಂದ ಇಂದಿನ ಪೀಳಿಗೆಗೆ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಮಹತ್ವದ ತಿಳಿಯುತ್ತದೆ. ಜೊತೆಗೆ ಶ್ರೀಗಂಧದ ಬೀಡು, ಗಂಧದಗುಡಿ ಎಂಬ ಖ್ಯಾತಿ ಚಾಮರಾಜನಗರದಿಂದ ಬೆಳಗಾವಿಯವರೆಗೆ ಚಿರಸ್ಥಾಯಿಯಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

3 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

4 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

4 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

7 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

11 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

11 hours ago