ಮಹಾನುಭವರ ಆಚಾರ ವಿಚಾರ ಸಂದೇಶಗಳನ್ನು ಸಮಾಜಕ್ಕೆ ತಲುಪಿಸಲು ಜಯಂತಿಗಳ ಆಚರಣೆ -ಡಾ ಪಿ ಶಿವರಾಜು
ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಮಹಾನುಭವರ ಸಂದೇಶಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ತಿಳಿಸಿದರು
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ರೇಣುಕಾಚಾರ್ಯ ಜಯಂತಿ, ಯೋಗಿನಾರೇಯಣ ಯತಿಂದ್ರರ ಜಯಂತಿ ಹಾಗೂ ಅಗ್ನಿ ಬನ್ನಿರಾಯ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ 12 ರಂದು ಸಂಜೆ 04 ಗಂಟೆಗೆ ರೇಣುಕಾಚಾರ್ಯ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ, ಮಾರ್ಚ್ 14 ರಂದು ಬೆಳಗ್ಗೆ 11.30 ಗಂಟೆಗೆ ಯೋಗಿನಾರೇಯಣ ಯತಿಂದ್ರರ ಜಯಂತಿಯನ್ನು ಕಿರುರಂಗಮಂದಿರದಲ್ಲಿ ಹಾಗೂ ಮಾರ್ಚ್ 28 ರಂದು ಮಧ್ಯಾಹ್ನ 12 ಗಂಟೆಗೆ ಅಗ್ನಿ ಬನ್ನಿರಾಯ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಜಯಂತಿಗಳ ಆಚರಣೆಗೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.
ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ ಎಂ ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…