ಬೆಂಗಳೂರು : ರಾಜ್ಯ ಹಿಂದಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯು ಅವೈಜ್ಞಾನಿಕವಾಗಿದ್ದು, ಈ ಸಂಬಂಧ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ದಾರೆ.
ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿದ ಜಾತಿ ಗಣತಿ ವರದಿ ಸರಿಯಿಲ್ಲ, ಲೋಪದಿಂದ ಕೂಡಿದೆ. ಇದನ್ನು ನಾವು ವಿರೋಧ ಮಾಡುತ್ತಿದೇವೆ. ವೈಜ್ಞಾನಿಕ ವರದಿ ಮತ್ತೊಮ್ಮೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒಕ್ಕಲಿಗರಾಗಿ ಈ ವರದಿಯನ್ನು ವಿರೋಧಿಸುತ್ತೇವೆ. ಪ್ರತ್ಯೇಕ ಲಿಂಗಾಯಿತ ಧರ್ಮ ಎಂದು ಹೋದವರು ಸೋತರು, ಲಿಂಗಾಯಿತ ಎಂದು ಕೂಗಿದವರು ಮಣ್ಣು ಕಚ್ಚಿದರು ಎಂದು ವ್ಯಂಗವಾಡಿದರು.
ಜಾತಿ ವಿಚಾರ ಮಾತನಾಡಿದ್ದು ತಪ್ಪು ಎಂಬ ಕಾಂಗ್ರೆಸ್ ನಾಯಕ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಚಿವ ಸಂಪುಟ ಸೇರಲು ಏನೇನೋ ಮಾತನಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…