ರಾಜ್ಯ

ಇದು ರೈತ ವಿರೋಧಿ ಬಜೆಟ್ ಎಂದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ದಕ್ಷಿಣ ರಾಜ್ಯಗಳ ತೆರಿಗೆ ಸಂಪತ್ತನ್ನು ಉತ್ತರಕ್ಕೆ ಸುರಿಯಲಾಗಿದೆ ಎಂದು ಇಂದಿನ ಕೇಂದ್ರ ಬಜೆಟ್‌ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ.

ಕೇಂದ್ರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು ರೈತರ ಆದಾಯ ಹೆಚ್ಚಿಸುವಂತಹ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಅನ್ನದಾತರು ಸಾಲದ ಹೊರೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್‌ನಲ್ಲಿ ಬಿಜೆಪಿ ಹಾಗೂ ಎನ್‌ಡಿಎಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

3 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

3 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

3 hours ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

3 hours ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

3 hours ago