Mysore
22
overcast clouds

Social Media

ಶುಕ್ರವಾರ, 13 ಜೂನ್ 2025
Light
Dark

ಇದು ಕರ್ನಾಟಕ ವಿರೋಧಿ ಬಜೆಟ್:‌ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು ಜನಪರ ಯೋಜನೆಯೂ ಇಲ್ಲ ಎಂದು ಕಿಡಿಕಾರಿದರು.

ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳು ಕೂಡ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು, ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂರು ಸಾಲ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಇನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್‌ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕೆ ವಂಚನೆ ಮಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು.

 

Tags:
error: Content is protected !!