ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು ಜನಪರ ಯೋಜನೆಯೂ ಇಲ್ಲ ಎಂದು ಕಿಡಿಕಾರಿದರು.
ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳು ಕೂಡ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ.
ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು, ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂರು ಸಾಲ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಇನ್ನು ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕೆ ವಂಚನೆ ಮಾಡಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಿಡಿಕಾರಿದರು.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…