ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಎಲ್ಲಾ ಶ್ರಮಶೀಲ ಮಧ್ಯಮ ವರ್ಗದ ಪರವಾಗಿ, ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ ₹12 ಲಕ್ಷ ಆದಾಯದವರೆಗೆ “ಶೂನ್ಯ ಆದಾಯ ತೆರಿಗೆ” ಘೋಷಿಸಿದ್ದಕ್ಕಾಗಿ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಜಿ ಅವರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ.
ನಮ್ಮ ಬಿಜೆಪಿ ನೇತೃತ್ವದ NDA ಸರ್ಕಾರದ ಈ ನಿರ್ಧಾರವು ಕೋಟ್ಯಂತರ ಮಧ್ಯಮ ವರ್ಗದ ಸಂಬಳ ಪಡೆಯುವ ಉದ್ಯೋಗಿಗಳ ಉಳಿತಾಯವನ್ನು ಹೆಚ್ಚಿಸುತ್ತದೆ ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ.
ಬಡ್ಡಿಯ ಮೇಲಿನ TDS ವಿನಾಯಿತಿಗಳನ್ನು ₹50,000 ರಿಂದ ₹1,00,000 ಕ್ಕೆ ಹೆಚ್ಚಿಸುವುದರಿಂದ ಹಿರಿಯ ನಾಗರಿಕರು ಸಹ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ.
ಈ ಮೂಲಕ ಕೇಂದ್ರದ ಬಜೆಟ್‌ನ್ನು ರಾಜ್ಯ ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದು, ಕೇಂದ್ರ ಬಜೆಟ್ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್ ಮತ್ತು…
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…
ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…