ಬೆಂಗಳೂರು: ಕೇಂದ್ರ ಬಜೆಟ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಇದು ಕೇವಲ ಆಂಧ್ರಪ್ರದೇಶ ಹಾಗೂ ಬಿಹಾರ ಬಜೆಟ್ ಎಂದು ತೀವ್ರ ಕಿಡಿಕಾರಿದರು.
ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೇರೆ ರಾಜ್ಯಗಳನ್ನು ಗಮನಿಸಿಲ್ಲ. ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳನ್ನು ಬಜೆಟ್‌ನಲ್ಲಿ ಪರಿಗಣನೆಗೆ ತೆಗೆದುಕೊಂಡಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿದೆ ಎಂದು ಕಿಡಿಕಾರಿದರು.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…