ರಾಜ್ಯ

ಕೇಂದ್ರ ಸರ್ಕಾರ GST ಜಾರಿ ಮಾಡಿ 8 ವರ್ಷ ಭಾರತೀಯರ ಹಣ ಸುಲಿಗೆ ಮಾಡಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಈ ಕುರಿತು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲಿನ ಜೊತೆಗೆ ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದರು.

ಬೆಂಗಳೂರಿನ ಮೆಟ್ರೋಗೆ ಶೇಕಡಾ.87ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ.

GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ತೀರಿ ಎಂದು ಸಾರ್ವಜನಿಕರಿಗೆ ಪ್ರಶ್ನಿಸಿದರು.

ಇದನ್ನು ಓದಿ: ಹುತಾತ್ಮ ಪೊಲೀಸರ ಸ್ಮರಣೆ ಎಲ್ಲರ ಕರ್ತವ್ಯವಾಗಿದೆ: ಮಂಜುಳಾ ಇಟ್ಟಿ

“ದೀಪಾವಳಿ ಗಿಫ್ಟ್” ಎಂದು ಜಾಹೀರಾತು ನೀಡಿರುವ ಮೋದಿ ಸರ್ಕಾರದ GST ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.

ಒಂದು ಲಕ್ಷದ 20 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದೀವಿ. ಕೇಂದ್ರದಿಂದ ನಯಾ ಪೈಸೆ ಕೊಡುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದರು.

ಇನ್ನು ಬಿಜೆಪಿಯ ಆರ್.ಅಶೋಕ್, ವಿಜಯೇಂದ್ರ ಸೇರಿ ಯಾರದ್ದೂ ಸ್ವಂತ ಮಾತು ಇಲ್ಲ. RSS ನವರು ಬರೆದುಕೊಟ್ಟಿದ್ದನ್ನು ಓದಿ ಹೋಗುವುದಷ್ಟೆ ಇವರ ಕೆಲಸ ಎಂದರು.

ವಿಧಾನಸಭಾ ಅಧಿವೇಶನ‌ ವೇಳೆ ಒಮ್ಮೆ ಆರ್.ಅಶೋಕ್ ಗೆ ಕೇಳಿದ್ದೆ. ಆಗ ಆರ್.ಅಶೋಕ್ ಅವರು, “ಏನು ಮಾಡೋದು ಸರ್. RSS ನವರು ಒಬ್ರು ಬಂದು ಕೂತಿರ್ತಾರೆ. ಅವರು ಹೇಳಿದ್ದನ್ನು ಹೇಳದೇ ಹೋದರೆ ನಮ್ಮನ್ನು ಬಿಡಲ್ಲ ಸಾರ್” ಎಂದು ಉತ್ತರಿಸಿದ್ದರು ಎಂದು ವಿವರಿಸಿದರು.

ಇನ್ನು ಸಂಸದ ತೇಜಸ್ವಿ ಸೂರ್ಯ. ನಾನು ಇವರನ್ನು ಅಮವಾಸ್ಯೆ ಸೂರ್ಯ ಎಂದು ಕರಿತೀನಿ. ರಾಜ್ಯದ ಆಗುತ್ತಿರುವ ಅನ್ಯಾಯ, ದ್ರೋಹದ ಬಗ್ಗೆ ಅಮವಾಸೆ ಸೂರ್ಯ ಇವತ್ತಿನವರೆಗೆ ಬಾಯಿ ಬಿಟ್ಟಿದ್ದಾರಾ? ಸಚಿವರಾದ ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಅವರು ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಮೋಸ, ದ್ರೋಹದ ಬಗ್ಗೆ ಒಂದೇ ಒಂದು ದಿನ ಬಾಯಿ ಬಿಟ್ಟಿದ್ದಾರಾ? ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಅವರು ಗೆದ್ದ ಪಾರ್ಲಿಮೆಂಟ್ ಕ್ಷೇತ್ರಕ್ಕಾಗಲೀ ಏನು ಸಿಕ್ಕಿದೆ ಹೇಳಿ ಎಂದು ಪ್ರಶ್ನಿಸಿದರು‌.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

13 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

13 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

13 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

13 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

13 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

14 hours ago