ಪಾಂಡಿಚೆರಿ : ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.
ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.
ರೈತರ ಕೃಷಿ ಭೂಮಿ ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದು ತಿಳಿಸದರು.
ಸಮಾವೇಶದಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ಪಾಂಡಿಚೇರಿ ರಾಜ್ಯದ ಮುಖ್ಯಸ್ಥರಾಗಿ ರಾಜೇಂದ್ರನ್ ರವರನ್ನು ಆಯ್ಕೆ ಮಾಡಲಾಯಿತು ಮುಖಂಡರುಗಳಾದ ಪಿ ಆರ್ ಪಾಂಡ್ಯನ್. ಲಕ್ವೀಂನ್ದರ್ ಸಿಂಗ್. ಕೇರಳದ
ಕೆ ವಿ ಬಿಜು. ತೆಲಂಗಾಣದ ವೆಂಕಟೇಶ್ವರರಾವ್. ಮಾತಾಡಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದರು.
ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲಾ. ಮತ್ತಿತರ ಮುಖಂಡರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು. ಸಿಖ್ ಧರ್ಮದ ಲಾಂಛನವನ್ನು ಬಳಸದೆ ವಿಮಾನ ಪ್ರವೇಶಿಸಬೇಕೆಂಬ ಖ್ಯಾತೆ ತೆಗೆದ ಪೊಲೀಸರು. ನಂತರ ಕಾಯ್ದಿರಿಸಿರುವ ವಿಮಾನ ಟಿಕೆಟ್ ರದ್ದುಗೊಳಿಸಿ. ವಾಮಮಾರ್ಗದ ಮೂಲಕ ಚಳುವಳಿಯನ್ನು ಹತ್ತಿಕುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ದಕ್ಷಿಣ ಭಾರತದಲ್ಲಿ ರೈತ ಚಳುವಳಿಯ ಪ್ರಾಬಲ್ಯವನ್ನು ತಡೆಯಲು ಯತ್ನಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ಅವಮಾನ ಮಾಡುತ್ತಿದ್ದಾರೆ. ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು.





