cm siddaramayya 2
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇದರ ವಿರುದ್ದ ಕಾಂಗ್ರೆಸ್ ದೇಶಾದ್ಯಂತ ಅಭಿಯಾನವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರಗಳಲ್ಲಿ ಮತ ಕಳವು ಆಗಿರುವುದಕ್ಕೆ ಸಾಕ್ಷಿಗಳಿವೆ. ಕೆಪಿಸಿಸಿ ವತಿಯಿಂದ ನಡೆಸಿರುವ ಸಂಶೋಧನೆಯಿಂದ ಇದು ಸಾಬೀತಾಗಿದೆ. ಸೂಕ್ತ ಸಂದರ್ಭದಲ್ಲಿ ಆಯೋಗಕ್ಕೆ ಈ ಸಾಕ್ಷ್ಯಾಧಾರಗಳನ್ನು ಒದಗಿಸುವುದಾಗಿ ಹೇಳಿದ್ದಾರೆ.
ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ಚುನಾವಣಾ ಆಯೋಗದ ದುರ್ಬಳಕೆ, ಹೊಸದಾಗಿ ಸಮೀಕ್ಷೆ ನಡೆಸಲು ಉದ್ದೇಶಿಸಿರುವ ಜಾತಿಗಣತಿ, ಮುಡಾ ಪ್ರಕರಣ, ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರುಪಯೋಗ ಸೇರಿದಂತೆ ಮತ್ತಿತರ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಬಿಜೆಪಿಯ ದೊಡ್ಡ ಪ್ರಮಾಣದ ಚುನಾವಣಾ ದುರುಪಯೋಗದ ಬಗ್ಗೆ ರಾಹುಲ್ ಗಾಂಧಿ ಅವರ ಆರೋಪಗಳನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಕೇಂದ್ರದ ಆಡಳಿತ ಪಕ್ಷವು ಮತದಾರರ ಪಟ್ಟಿಯನ್ನು ದುರ್ಬಳಕೆ ಮಾಡುತ್ತಿದೆ ಮತ್ತು ಭಾರತ ಚುನಾವಣಾ ಆಯೋಗ ಸೇರಿದಂತೆ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…