ರಾಜ್ಯ

ಅಂತೂ ಇಂತೂ ಬರ ಪರಿಹಾರ ಬಂತು; ರಾಜ್ಯಕ್ಕೆ ಕೇಂದ್ರ ಕೊಟ್ಟಿದ್ದೆಷ್ಟು?

ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ.

ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 ಕೋಟಿ ರೂಪಾಯಿಗಳನ್ನು ಬರ ಪರಿಹಾರವನ್ನಾಗಿ ಕೊಡಬೇಕೆಂದು ಬೇಡಿಕಯನ್ನು ಇಟ್ಟಿತ್ತು. ಹೀಗೆ ರಾಜ್ಯ ಸರ್ಕಾರದಿಂದ ಬೇಡಿಕೆ ಬಂದರೂ ಸಹ ಕೇಂದ್ರ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆಹೋಗಿತ್ತು.

ಬಳಿಕ ಕೇಂದ್ರ ಸರ್ಕಾರ ಸೋಮವಾರದೊಳಗೆ ಪರಿಹಾರ ಧನವನ್ನು ನೀಡುವುದಾಗಿ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಧನವನ್ನು ನೀಡಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

41 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

50 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago