ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ ಸಿಗಲಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ಪೋಸ್ಟ್ ಹಾಕಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಪ್ರಸಾದ್ 2.0 ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಕಳೆದ ಡಿಸೆಂಬರ್‌ನಲ್ಲಿ ಸಲ್ಲಿಸಲಾದ ರೂ 184 ಕೋಟಿ ಮೊತ್ತದ ಈ ಪ್ರಸ್ತಾವನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ, ನೈರ್ಮಲ್ಯ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಪವಿತ್ರ ಕ್ಷೇತ್ರವನ್ನು ಮಾದರಿ ಯಾತ್ರಾಸ್ಥಳವಾಗಿ ರೂಪಿಸುವುದು ನನ್ನ ಗುರಿಯಾಗಿದೆ.
ಈ ಪ್ರಯತ್ನಕ್ಕೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…