ರಾಜ್ಯ

ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದ ಕೇಂದ್ರ ಸರ್ಕಾರ

ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಿದೆ.

ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.

ಧಾರವಾಡದಲ್ಲಿ ಶೀಘ್ರದಲ್ಲೇ ಆಧಾರ್‌ ಸೇವಾ ನಿರ್ವಹಣಾ ಕೇಂದ್ರದ ಸ್ಥಾಪನೆ. ನಮ್ಮ ಕರ್ನಾಟಕದಲ್ಲಿ ಈ ಮೊದಲು 6 ಜಿಲ್ಲೆಗಳಲ್ಲಿ ಆಧಾರ್‌ ಸೇವೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ಸೌಲಭ್ಯವನ್ನು ರಾಜ್ಯದ ಹೆಚ್ಚಿನ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಳಿದ ಪ್ರತಿ ಜಿಲ್ಲೆಗೂ ಒಂದರಂತೆ ರಾಜ್ಯಾದ್ಯಂತ 19 ಕೇಂದ್ರಗಳನ್ನು ಸ್ಥಾಪಿಸಲಾಯಿತು ಎಂದು ಮಾಹಿತಿ ನೀಡಿದರು.

ಆ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಮಾತ್ರ ಆಧಾರ್‌ ಕೇಂದ್ರ ಮುಂದುವರಿದಿತ್ತು. ಜಿಲ್ಲೆಗೆ ಒಂದೇ ಕೇಂದ್ರ ಎಂಬ ಹೊಸ ನಿಯಮದಂತೆ ಧಾರವಾಡದ ಕೇಂದ್ರವನ್ನು ಸ್ಥಗಿತಗೊಳಿಸಲಾಗಿತ್ತು. ನಾನು ಧಾರವಾಡ ಕೇಂದ್ರವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ಪ್ರಾರಂಭ ಮಾಡಬೇಕೆಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೃಷ್ಣವ್‌ ಅವರಿಗೆ ಪತ್ರ ನೀಡಿ ವಿನಂತಿಸಿದ್ದೆನು ಎಂದು ತಿಳಿಸಿದ್ದಾರೆ.

ಶಾಸಕ ಅರವಿಂದ್‌ ಬೆಲ್ಲದ್‌ ಅವರು ಸಹ ಧಾರವಾಡದಲ್ಲಿ ಆಧಾರ್‌ ಸೇವಾ ಕೇಂದ್ರ ಸ್ಥಾಪನೆಗೆ ನನಗೆ ವಿನಂತಿಸಿದ್ದರು. ಕೂಡಲೇ ನನ್ನ ಮಗುವಿಗೆ ಸ್ಪಂದಿಸಿ ಧಾರವಾಡ ಜಿಲ್ಲೆಗೆ ಅದರಲ್ಲಿಯೂ ಧಾರವಾಡದಲ್ಲಿ ಕೇಂದ್ರದ ಅವಶ್ಯಕತೆಯನ್ನು ಮನಗಂಡು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗ ಸೂಚನೆ ನೀಡಿದ್ದು, ಧಾರವಾಡದಲ್ಲಿಯೂ ಒಂದು ಕೇಂದ್ರವನ್ನು ವಿಶೇಷ ಪ್ರಕರಣದಡಿ ಸ್ಥಾಪಿಸುವಂತೆ ಆದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಟ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್:‌ ಮನೆಯ ಸುತ್ತ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್‌ ತೆರವು

ಹಾಸನ: ರಾಕಿಂಗ್‌ ಸ್ಟಾರ್‌ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್‌ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ…

22 mins ago

ಓದುಗರ ಪತ್ರ: ರಸ್ತೆ ಮೇಲೆ ವ್ಯಾಪಾರ ನಿಷೇಧಿಸಿ

ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ…

4 hours ago

ಓದುಗರ ಪತ್ರ: ರಸ್ತೆಗಳಲ್ಲಿ ಒಕ್ಕಣೆ ನಿಷೇಧಿಸಿ

ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ…

4 hours ago

ಓದುಗರ ಪತ್ರ: ಸಫಾರಿ ಮರು ಆರಂಭ ಬೇಡ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಮೋದಿ ಚಿತ್ತ ಈಗ ಬಂಗಾಳ, ತಮಿಳುನಾಡಿನತ್ತ

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕಳೆದ ವರ್ಷ ೨೦೨೫ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ…

4 hours ago

ದುಬಾರೆ ತೂಗುಸೇತುವೆ ನಿರ್ಮಾಣದ ನಿರೀಕ್ಷೆಯಲ್ಲಿ ಜನತೆ

ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು…

4 hours ago