Mysore
15
broken clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ.

ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ ಹಾಗೂ ಇಡೀ ಯೋಜನೆ ಕಾರ್ಯಸಾಧ್ಯತೆಯ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.

ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ದೇವನಹಳ್ಳಿ ಕೈಗಾರಿಕಾ ಪ್ರದೇಶದ ಕುಡಿಯುವ ನೀರು ಒದಗಿರುವ ಉದ್ದೇಶದ ಈ ಯೋಜನೆಗೆ ಈವರೆಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದೆ.

ಪಶ್ಚಿಮ ಘಟ್ಟದ ಸೂಕ್ಷ್ಮ ಜೀವವೈವಿದ್ಯದ ಮೇಲೆ ಹಾನಿಯಾಗಿದೆ. ಇದಲ್ಲದೇ ಭೂಕುಸಿತದಿಂದ ಅನೇಕ ದುರಂತಗಳು ಸಂಭವಿಸಿವೆ. ಆದರೆ ಕುಡಿಯುವ ನೀರು ಒದಗಿಸುವ ಉದ್ದೇಶವೇ ಈಡೇರಿಲ್ಲ. ಬರಪೀಡಿತ ಪ್ರದೇಶಕ್ಕೆ ಹನಿ ನೀರು ಕೂಡ ಹರಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿರುವ ಸಚಿವಾಲಯ, ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಹೇಳಿದೆ.

 

 

Tags:
error: Content is protected !!