Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹೋಳು ಮಾಡುವುದು, ಡೆದಾವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸರಿಸಾಟಿ. 75 ವರ್ಷದಿಂದ ಇದನ್ನೇ ಮಾಡಿದೆ ಹಾಗೂ ಮುಂದುವರಿಸಿದೆ. ಕಾಂಗ್ರೆಸ್‌ ನೀತಿಯೇ ಡಿವೈಡ್‌ ಅಂಡ್‌ ರೂಲ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದು ಅಖಂಡ ಭಾರತವನ್ನು ಹೋಳು ಮಾಡಿತು. ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ.

ದುರುದ್ದೇವಿಷ್ಟೇ, ನಾಡಪ್ರಭು ಕೆಂಪೇಡೌಡರ ಪರಂಪರೆಯನ್ನು ಬೇರು ಸಹಿತ ಹಾಳು ಮಾಡುವುದು. ಗ್ರೇಟರ್‌ ಬೆಂಗಳೂರು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರಿಕರಣವಲ್ಲ. ಇದು ಲೂಟಿಯ ವಿಕೇಂದ್ರಿಕರಣ ಎಂದು ಕಿಡಿಕಾರಿದ್ದಾರೆ.

Tags:
error: Content is protected !!