Mysore
19
scattered clouds

Social Media

ಸೋಮವಾರ, 26 ಜನವರಿ 2026
Light
Dark

ರಾಜಭವನ ಅಧಿಕಾರಿಗಳ ತನಿಖೆಗೆ ಅನುಮತಿ ಕೋರಿದ್ದ ಐಜಿಪಿ ವಿರುದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಸಿಬಿಐ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್‌ ಒಬ್ಬ ಭ್ರಷ್ಟಾಧಿಕಾರಿಯಾಗಿದ್ದಾರೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡು ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಸರಣಿ ಅಪರಾಧಗಳನ್ನು ಎಸಗಿರುವ ಒಬ್ಬ ಭ್ರಷ್ಟ ಐಪಿಎಸ್‌ ಅಧಿಕಾರಿಯೊಬ್ಬ ರಾಜಭವನ ಅಧಿಕಾರಿ ವಿರುದ್ಧ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ. ಈತನಿಗೆ ಸರ್ಕಾರದ ಸಂಪೂರ್ಣ ಕೃಪಾಕಟಾಕ್ಷವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Tags:
error: Content is protected !!