Mysore
19
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

60% ಕಮಿಷನ್ ಸುಲಿಗೆ ಆರೋಪ ಪುನರುಚ್ಚರಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 60% ಕಮಿಷನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ
ಸರ್ಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು, ಕಾಂಗ್ರೆಸ್ ಸರ್ಕಾರದಲ್ಲೂ 40% ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾದ ಆರೋಪ ಎಂದು ಟಾಂಗ್‌ ನೀಡಿದರು.

ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದ್ದು, ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಕೇಳಿದ್ದಾರೆ.

 

Tags:
error: Content is protected !!