ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 60% ಕಮಿಷನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರ್ಕಾರಕ್ಕಿಂತ ಹಿಂದಿನ ಬಿಜೆಪಿ
ಸರ್ಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು, ಕಾಂಗ್ರೆಸ್ ಸರ್ಕಾರದಲ್ಲೂ 40% ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾದ ಆರೋಪ ಎಂದು ಟಾಂಗ್ ನೀಡಿದರು.
ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದ್ದು, ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಕೇಳಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…