ರಾಜ್ಯ

ಕನ್ನಡ ಪುಸ್ತಕಗಳ ಸಗಟು ಖರೀದಿ ಮಾಡಲು ಎಚ್.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ೪-೫ ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ ಬಗ್ಗೆ ನನಗೆ ಮಾಧ್ಯಮಗಳ ಮೂಲಕ ತಿಳಿಯಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಪುಸ್ತಕ ಮಳಿಗೆಯಲ್ಲಿ ನಡೆದ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ ಎಂಬ ಅಂಶವನ್ನು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್‌ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ. ಹೆಮ್ಮರವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃಪ್ರೀತಿಯಿಂದ ನೋಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಕುಮಾರಸ್ವಾಮಿ ಸಿಎಂ ಅವರನ್ನು ಕೋರಿದ್ದಾರೆ.

ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತಾವು ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago