ಬೆಂಗಳೂರು: ತೀವ್ರ ಕಫಾ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಕೊಂಚ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕೂಡ ಕಫಾ ಹಾಗೂ ಕೆಮ್ಮು ಕಡಿಮೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಚ್‌ಡಿಕೆ ಇಂದು ದೆಹಲಿಗೆ ತೆರಳಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.





