ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಅಂದರೆ ಭಯ ಪಡುವ ಅಗತ್ಯವಿಲ್ಲ. ಈ ವಿಷಯದಲ್ಲಿ ಅವರು ಕಾನೂನು ಹೋರಾಟ ಮಾಡಲು ನಮ್ಮ ತಕರಾರು ಕೂಡ ಇಲ್ಲ. ಕಾನೂನು ಹೋರಾಟದ ನೆಪದಲ್ಲಿ ತನಿಖೆಗೆ ಅಡ್ಡಿಪಡಿಸುವ ಕೆಲಸ ಮಾಡಬಾರದು ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯಾಗಬೇಕು ಎಂಬ ಉದ್ದೇಶದಿಂದ ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಆ ಬಳಿಕ ಕಾನೂನು ತಜ್ಞರ ಸಲಹೆ ಪಡೆದು, ಅಳೆದು ತೂಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದರು.
ಉನ್ನತ ಸ್ಥಾನದಲ್ಲಿ ಇದ್ದಾಗ ಯಾವುದೇ ಆರೋಪಗಳು ಬಂದರೆ ಆ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಾರ್ವಜನಿಕ ಜೀವನದಲ್ಲಿ ಶುದ್ಧತೆ ಕಾಯ್ದುಕೊಳ್ಳದಿದ್ದರೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದಂತಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಐದು ವರ್ಷ ಆಡಳಿತ ನಡೆಸಲು ಜನತೆ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದಾರೆ. ಈ ಸರ್ಕಾರವನ್ನು ಅಸ್ಥಿರಗೊಳಿಸಿ ನಾವು ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶವಿಲ್ಲ. ಅವರು ಐದು ವರ್ಷ ಪೂರೈಸಬೇಕು ಎಂಬುದೇ ನಮ್ಮ ಆಸೆ. ಸಿದ್ದರಾಮಯ್ಯ ಆರೋಪ ಮುಕ್ತರಾದ ನಂತರ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೂ ನಮ್ಮ ಅಭ್ಯಂತರವಿಲ್ಲ ಎಂದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…